ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಅವರು ಆದೇಶ ಹೊರಡಿಸಿದ್ದಾರೆ.
ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ ಮಾಡುವಂತಿಲ್ಲ, ಗುಂಪೂಗೂಡುವಂತಿಲ್ಲ. ಪಟಾಕಿ ಸಿಡಿಸಿ ಸಂಭ್ರಮಾಚರಣೆ, ಮಾರಾಕಾಸ್ತ್ರಗಳನ್ನು ಒಯ್ಯುವಂತಿಲ್ಲ ಎಂದು ತಿಳಿಸಲಾಗಿದೆ.
Comments are closed.