Good News : ರಾಜ್ಯ ಸರ್ಕಾರದಿಂದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 15000 ಶಿಕ್ಷಕರ ನೇಮಕಾತಿಗೆ ಚಾಲನೆ!
ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದ್ದು, ಶೀಘ್ರವೇ 800 ವಿಜ್ಞಾನ ಉಪನ್ಯಾಸಕರು ಹಾಗೂ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
Comments are closed.