ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ
ವಿದ್ಯಾರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಸೂಚನೆ
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಶೈಕ್ಷಣಿಕ ಯೋಜನೆಯಡಿ ಹಮ್ಮಿಕೊಳ್ಳಲಾಗುತ್ತಿರುವ ಐ.ಎ.ಎಸ್., ಕೆ.ಎ.ಎಸ್. ತರಬೇತಿ ಹಾಗೂ ಬ್ಯಾಂಕಿಂಗ್, ಆರ್.ಆರ್.ಬಿ., ಕೆ.ಪಿ.ಎಸ್.ಸಿ. ಮತ್ತು ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಘದ www.kkhracs.com ವೆಬ್ಸೈಟ್ದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ ಎಂದು ಕಲಬುರಗಿಯ ಕೃಷಿ ಮತ್ತು ಸಾಂಸ್ಕøತಿಕ ಸಂಘದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಇದೇ ಮಾರ್ಚ್ 10 ರಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಲಿದೆ.
ಐ.ಎ.ಎಸ್. ಮತ್ತು ಕೆ.ಎ.ಎಸ್. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾರ್ಚ್ 10 ರಂದು ಬೆಳಿಗ್ಗೆ 10 ಗಂಟೆಗೆ ಹಾಗೂ ಬ್ಯಾಂಕಿಂಗ್, ಆರ್.ಆರ್.ಬಿ, ಕೆ.ಪಿ.ಎಸ್.ಸಿ. ಹಾಗೂ ಗ್ರೂಪ್-ಸಿ ಪೂರ್ವಭಾವಿ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಅಂದು ಮಧ್ಯಾಹ್ನ 3 ಗಂಟೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಮೇಲ್ಕಂಡ ಸ್ಥಳದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.
Comments are closed.