Shubhashaya News

ಶಹಾಬಾದ ನಗರಸಭೆಯ ವಾರ್ಡ್ ನಂ. 18ರ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ

ವಿವಿಧ ಕಾರಣಗಳಿಂದ ತೆರವಾದ ಕಲಬುರಗಿ ಜಿಲ್ಲೆಯ ಶಹಾಬಾದ ನಗರಸಭೆಯ ವಾರ್ಡ್ ಸಂಖ್ಯೆ 18ರ (ಲಕ್ಷ್ಮೀಗಂಜ್ ಮತ್ತು ಹರಳಯ್ಯ ನಗರ) ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಬುಧವಾರ ವೇಳಾಪಟ್ಟಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ಶಹಾಬಾದ ನಗರಸಭೆಯ ವಾರ್ಡ್ ನಂ. 18ರ (ಲಕ್ಷ್ಮೀಗಂಜ್ ಮತ್ತು ಹರಳಯ್ಯ ನಗರ) ಸದಸ್ಯ ಸ್ಥಾನವನ್ನು ಅನುಸೂಚಿತ ಪಂಗಡಕ್ಕೆ ಮೀಸಲಿಡಲಾಗಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 17ರಂದು ಕೊನೆಯ ದಿನವಾಗಿದ್ದು, ಮಾರ್ಚ್ 18ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 20ರಂದು ಅಂತಿಮ ದಿನವಾಗಿರುತ್ತದೆ. ಅವಶ್ಯವಿದ್ದಲ್ಲಿ ಮತದಾನವು ಮಾರ್ಚ್ 29 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮರುಮತದಾನದ ಅವಶ್ಯವಿದ್ದಲ್ಲಿ ಮತದಾನವನ್ನು ಮಾರ್ಚ್ 30 ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮಾರ್ಚ್ 31ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Comments are closed.

Don`t copy text!