Shubhashaya News

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಏಪ್ರಿಲ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Comments are closed.

Don`t copy text!