18 ವರ್ಷ ತುಂಬಿದ ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ಲಕ್ಷ ರೂ. ಜಮಾ ಮಾಡಿ : ಸರ್ಕಾರಕ್ಕೆ ಮಾಜಿ ಸಿಎಂ `BSY’ ಆಗ್ರಹ
ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ನೆಪ ಹೇಳದೇ ಹಣ ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಬಡ ಹೆಣ್ಣುಮಕ್ಕಳ ಬಾಳಿಗೆ ಬೆಳಕಾಗುವ ಉದ್ದೇಶದಿಂದ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ವೇಳೆ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದೆ. ಈಗ ಅದರ ಅನುಷ್ಠಾನದ ವಿಚಾರದಲ್ಲಿ ಸರ್ಕಾರ ಮೀನ-ಮೇಷ ಎಣಿಸುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರ ತಂದೆ-ತಾಯಿ ಇಬ್ಬರೂ ಮೃತಪಟ್ಟ ಕುಟುಂಬಗಳ ಹೆಣ್ಣು ಮಕ್ಕಳ ಪರಿಸ್ಥಿತಿಯನ್ನು ಸೂಕ್ಷ್ಮತೆ, ಮಾನವೀಯತೆಯಿಂದ ಪರಿಗಣಿಸಲಿ. ಮೊದಲು ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗಳಿಗೆ ಹಣ ಕೊಡಲಿ. ಭಾಗ್ಯಲಕ್ಷ್ಮಿ ಬಾಂಡ್ ಪಡೆದ ಫಲಾನುಭವಿಗೆ 18 ವರ್ಷ ತುಂಬಿದರೂ ಅವರ ಬ್ಯಾಂಕ್ ಖಾತೆಗೆ 1 ಲಕ್ಷ ರೂ. ಜಮೆ ಆಗಿಲ್ಲ. ರಾಜ್ಯದಲ್ಲಿ 34.50 ಲಕ್ಷ ಭಾಗ್ಯಲಕ್ಷ್ಮಿ ಫಲಾನುಭವಿಗಳಿದ್ದಾರೆ. ಹೆಣ್ಣುಮಕ್ಕಳ ಉನ್ನತ ವ್ಯಾಸಂಗ ಸೇರಿದಂತೆ ಇತರೆ ಕಾರ್ಯಗಳಿಗೆ ಆ ಹಣ ನೆರವಾಗುತ್ತದೆ ಎಂದು ತಿಳಿಸಿದ್ದಾರೆ.
Comments are closed.