Shubhashaya News

ಬೆಂಗಳೂರಿಗೆ ಜಾಗತಿಕ ಮನ್ನಣೆ ಬಂದಿದ್ದು ಎಸ್‍ಎಂಕೆಯಿಂದ- ಹರ್ಷಾ ಗುತ್ತೇದಾರ

ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಅಂತರಾಷ್ಟ್ರೀಯ ಮನ್ನಣೆ ಬಂದಿದ್ದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಂದ ಎಂದು ಕಲಬುರಗಿ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಬಣ್ಣಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಅವರು ತಮ್ಮ ಶೋಕ ಸಂದೇಶದಲ್ಲಿ, ರಾಜ್ಯದ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಸ್ಪೀಕರ್ ಆಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಎಸ್.ಎಂ.ಕೃಷ್ಣ ಅವರು ನೀಡಿರುವ ಕೊಡುಗೆ ಅಪಾರವಾದದ್ದು ಎಂದು ಹೇಳಿದ್ದಾರೆ.

ಕರ್ನಾಟಕ ಅಭಿವೃದ್ಧಿಯ ವಿಚಾರದಲ್ಲಿ ಎಸ್.ಎಂ.ಕೃಷ್ಣ ಅವರು ತಮ್ಮದೇ ಆದ ದೂರದೃಷ್ಟಿಯನ್ನು ಹೊಂದಿದ್ದರು. ಬೆಂಗಳೂರಿನ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರಿಂದಲೇ ಬೆಂಗಳೂರಿಗೆ ವಿಶ್ವಮಟ್ಟದಲ್ಲಿ ಸಿಲಿಕಾನ್ ಸಿಟಿ, ಐಟಿ- ಬಿಟಿ ಸಿಟಿ ಎಂಬ ಹೆಸರು ಬಂದಿತ್ತು. ತಮ್ಮ ಅನನ್ಯವಾದ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಬದುಕು ಎಲ್ಲರಿಗೂ ಸ್ಪೂರ್ತಿ ಆಗಿದೆ ಎಂದಿದ್ದಾರೆ.

ಹಿರಿಯ ಮುತ್ಸದ್ದಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದು, ಕರ್ನಾಟಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

 

 

Comments are closed.

Don`t copy text!