Shubhashaya News

ಕನ್ನಡ ಕಾವ, ಜಾಣ, ರತ್ನ ಪರೀಕ್ಷಾ ಫಲಿತಾಂಶ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನಿಂದ 2020-21ನೇ ಸಾಲಿನಲ್ಲಿ ಆಯೋಜಿಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮರಾಜ್ ದಂಡಾವತಿ ಅವರು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷೆಯ ಫಲಿತಾಂಶ ಪಟ್ಟಿಯನ್ನು ರಾಜ್ಯದ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ತಿತಿತಿ.ಞಚಿsಚಿಠಿಚಿ.iಟಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಮರು ಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು ದೂರವಾಣಿ ಸಂಖ್ಯೆ: 080-26623584ಗೆ ಸಂಪರ್ಕಿಸಲು ಕೋರಲಾಗಿದೆ.

Comments are closed.

Don`t copy text!