Shubhashaya News

ಮಹಿಳಾ ಹಾಗೂ ರೋಜಗಾರ್ ದಿನಾಚರಣೆ ಉದ್ಯೋಗ ಖಾತ್ರಿ ಯೋಜನೆಯಡಿ ಸರ್ವರಿಗೂ ಸಮ ಕೂಲಿ

ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿ ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರಿಗೂ ಸಮ ಕೂಲಿ ನೀಡಲಾಗುತ್ತದೆ. ಹೀಗಾಗಿ ಉದ್ಯೋಗಕ್ಕಾಗಿ ಗ್ರಾಮಸ್ಥರು ವಲಸೆ ಹೋಗದೆ ಇಲ್ಲಿಯೇ ಇದ್ದು ನರೇಗಾ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡಿ, ಸಮಾನ ಕೂಲಿ ಪಡೆದುಕೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಣಮಂತರಾಯ ಅವರು ಹೇಳಿದರು.
ಜಿಲ್ಲೆಯ ಅಫಜಲಪುರ ತಾಲೂಕಿನ ಅತನೂರ ಗ್ರಾಮ ಪಂಚಾಯತಿಯ ಗರಗಂಜಿ ಹಳ್ಳದ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ವಿಶ್ವ ಮಹಿಳಾ ಹಾಗೂ ರೋಜಗಾರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯಾರೊಬ್ಬರೂ ಉದ್ಯೋಗವಿಲ್ಲವೆಂದು ಸಮಯವನ್ನು ವ್ಯರ್ಥ ಮಾಡಬಾರದು. ಬೇಸಿಗೆ ಆರಂಭವಾಗಿದ್ದು, ಯೋಜನೆಯಡಿ ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಉದ್ಯೋಗ ನೀಡಲಾಗುವುದು. ಆಗ ಎಲ್ಲರೂ ಕೆಲಸ ಮಾಡಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪಾರ್ವತಿ ಜಗನಾಥ ಗೋಳಸಾರ ಮಾತನಾಡಿ, ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಮುಂಬರುವ ದಿನಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಇನ್ನೂ ಹೆಚ್ಚು ಜನರಿಗೆ ಉದ್ಯೋಗ ನೀಡಲಾಗುವುದು ಎಂದರು.
ಐಇಸಿ ಕೋ-ಆಡಿನೇಟರ್ ಶೋಭಾ ಕಣಮಸ್ಕರ್ ಅವರು ರೋಜಗಾರ ದಿನಾಚರಣೆ ಹಾಗೂ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Comments are closed.

Don`t copy text!