ಚಿತ್ತಾಪುರ: ಪಟ್ಟಣದ ಬಸ್ ನಿಲ್ದಾಣದ ನಾಗಾವಿ ಕ್ಯಾಂಪಸ್‍ವರೆಗೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ ಅವರು ಬಸ್ ಘಟಕ ವ್ಯವಸ್ಥಾಪಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಚಿತ್ತಾಪುರ ಬಸ್ ನಿಲ್ದಾಣದಿಂದ ನಾಗಾವಿ ಕ್ಯಾಂಪಸ್‍ವರೆಗೆ ಸರಿಯಾದ ರೀತಿಯಲ್ಲಿ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕೂಡಲೇ ಬಸ್ ಸಂಚಾರ ವ್ಯವಸ್ಥೆ ಮಾಡಬೇಕು. ಬಸ್ ನಿಲ್ದಾಣದಿಂದ ಪ್ರತಿ ನಿತ್ಯ 300 ರಿಂದ 400 ಶಾಲಾ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ನಾಗಾವಿ ಕ್ಯಾಂಪಸ್‍ಗೆ ಹೋಗುತ್ತಾರೆ. ಶಾಲಾ ಮಕ್ಕಳ ಅನುಕೂಲಕ್ಕಾಗಿ ಬೆಳಗ್ಗೆ 9 ಗಂಟೆಗೆ ಹಾಗೂ ಸಂಜೆ 4:30 ಗಂಟೆಗೆ ನಿತ್ಯ ಸರಿಯಾದ ಸಮಯಕ್ಕೆ ಬಸ್ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪುರಸಭೆ ಸದಸ್ಯರಾದ ಶೀಲಾ ಕಾಶಿ, ಗೋವಿಂದ ನಾಯಕ್, ಪ್ರಭು ಗಂಗಾಣಿ ಇದ್ದರು
Prev Post
Next Post
Comments are closed.