Shubhashaya News

ರಾಜಕುಮಾರಗೆ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ

ಚಿತ್ತಾಪುರ: ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಕೊಡ ಮಾಡುವ ಡಾ. ಅಂಬೇಡ್ಕರ್ ಸೇವಾ ಶ್ರೀ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಕಾರ್ಯಕರ್ತ ರಾಜಕುಮಾರ ಘಾವರೀಯಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ. ಎಸ್.ಪಿ ಸುಮಾನಾಕ್ಷರ ತಿಳಿಸಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಹಾಗೂ ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗಾಗಿ ಸತತ ಹೋರಾಟ ಮಾಡಿದ್ದಾರೆ. ಇವರ ಕಾರ್ಯ ಸಾಧನೆ ಗುರುತಿಸಿ ಮಾ.13 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.

Don`t copy text!