Shubhashaya News

1 -6 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್, ಬೇಸಿಗೆ ರಜೆ ಘೋಷಣೆ ಮಾಡಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಉತ್ತಿರ್ಣ ಮಾಡುವ ಮತ್ತು ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡುವ ಬಗ್ಗೆ ಘೋಷಣೆ ಮಾಡಿಲ್ಲ. ಈ ಕುರಿತು ಯಾವ ನಿರ್ಧಾರ ತೆಗೆದುಕೊಂಡಿಲ್ಲ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಶಾಲೆಗಳಲ್ಲಿ ಒಂದರಿಂದ 6ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು ಎನ್ನುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಅವರು ಹೇಳಿದ್ದಾರೆ.

ಒಂದರಿಂದ ಐದನೇ ತರಗತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ ನಲಿಯೋಣ ಕಾರ್ಯಕ್ರಮ ಬಿತ್ತರಿಸಲಾಗುತ್ತಿದೆ. ದೂರದರ್ಶನದಲ್ಲಿ ಸಂವೇದ ತರಗತಿಗಳು ನಡೆಯುತ್ತಿವೆ. ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ಸ್ಥಳೀಯ ಸಂಪನ್ಮೂಲಗಳ ನೆರವಿನೊಂದಿಗೆ ಪರಾಮರ್ಶೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿಲ್ಲ. ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

COURTESY: DAILY HUNT

Comments are closed.

Don`t copy text!