ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದಲ್ಲದೇ ಸರ್ಕಾರ ಹೊರಡಿಸುವ ಮಾರ್ಗಸೂಚಿ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಯಡ್ರಾಮಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ಯಡ್ರಾಮಿ ಪಂಚಾಯತ್ ವ್ಯಾಪ್ತಿಯ ಹೋಟೆಲ್, ರೆಸ್ಟೋರೆಂಟ್, ಧಾಬಾ ಹಾಗೂ ಸಂತೆಗಳ ಸ್ಥಳಗಳಲ್ಲಿ ಸಾರ್ವಜನಿಕರು ಸಾರ್ವಜನಿಕ ಅಂತರ ಕಾಯ್ದುಕೊಳ್ಳದಿದ್ದಲ್ಲಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ಅವರಿಗೆ ವಾಣಿಜ್ಯ ಅಂಗಡಿಗಳ ಮಾಲೀಕರು ಪ್ರವೇಶ ನೀಡಬಾರದು. ಒಂದು ವೇಳೆ ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದಲ್ಲಿ ಅಂತಹ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ದಂಡ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಕೋವಿಡ್-19 ಸುರಕ್ಷತಾ ಕ್ರಮಗಳನ್ನು ತಪ್ಪದೇ ಎಲ್ಲರೂ ಪಾಲಿಸಿ, ವೈರಸ್ ಹರಡುವುದನ್ನು ನಿಲ್ಲಿಸಬೇಕು. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಅವರು ತಿಳಿಸಿದ್ದಾರೆ.
Comments are closed.