Shubhashaya News

ಸೈನಿಕ ಹಾಗೂ ಅರೆಸೈನಿಕ ಬಲಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಸಂಘದ ಕ್ರಿಯಾ ಯೋಜನೆಯಡಿ 2020-21ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಯುವಕ, ಯುವತಿಯರಿಗಾಗಿ ಸೈನಿಕ ಮತ್ತು ಅರೆಸೈನಿಕ ಬಲಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತವಾಗಿ ಪೂರ್ವಭಾವಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ವಿಭಾಗದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿನ ಆಸಕ್ತಿಯುಳ್ಳ ಯುವಕ, ಯುವತಿಯರು ಈ ತರಬೇತಿ ಪಡೆಯಲು ತಿತಿತಿ.ಞಞhಡಿಚಿಛಿs.ಛಿom ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2021ರ ಮಾರ್ಚ್ 25ರ ಒಳಗಾಗಿ ಅರ್ಜಿ ಸಲ್ಲಿಸಬೇಕೆಂದು ಅವರು ಹೇಳಿದ್ದಾರೆ.

Comments are closed.

Don`t copy text!