Shubhashaya News

ಮಾಜಿ ಶಾಸಕ ವಾಲ್ಮೀಕಿ ನಾಯಕ ಹಠಾತ್ ನಿಧನ

ಚಿತ್ತಾಪೂರದ ಮಾಜಿ ಶಾಸಕ ವಾಲ್ಮೀಕಿ ನಾಯಕ ಇಂದು ಬೆಳಿಗ್ಗೆ ಸಂಭವಿಸಿದ ಹೃದಯಘಾತದಿಂದ ಹಠಾತ್ ನಿಧನ ಹೊಂದಿದ್ದಾರೆ.
2009ರಲ್ಲಿ ಜರುಗಿದ್ದ ಚಿತ್ತಾಪೂರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಸೋಲಿಸಿ ಸೋಲಿನ ರುಚಿ ತೋರಿಸಿದ್ದರು.
2013 ಮತ್ತು 2018ರ ವಿಧಾನಸಭೆ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ಕೆಲವು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

Comments are closed.

Don`t copy text!