Shubhashaya News

ಮಾಜಿ ಶಾಸಕ ವಾಲ್ಮೀಕಿ ನಿಧನಕ್ಕೆ ಜಿಪಂ ಸದಸ್ಯ ಅರವಿಂದ ಚವ್ಹಾಣ ಸಂತಾಪ

ಚಿತ್ತಾಪುರ: ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ನಿಧನಕ್ಕೆ ಜಿಪಂ ಸದಸ್ಯ ಅರವಿಂದ ಚವ್ಹಾಣ ತೀವ್ರ ಸಂತಾಪ ಸೂಚಿಸಿದ್ದಾರೆ.
ವಾಲ್ಮೀಕಿ ನಾಯಕ ಅವರು ಚಿತ್ತಾಪುರ ಮತಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸರಳ, ಸಜ್ಜನ ರಾಜಕಾರಣಿಯಾಗಿದ್ದರು. ಅಭಿವೃದ್ಧಿಗೆ ಪೂರಕವಾಗಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಉಂಟಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಮೃತರ ಕುಟುಂಬ ವರ್ಗದವರಿಗೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

Comments are closed.

Don`t copy text!