ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಇದೇ ಮಾರ್ಚ್ 20 ರಂದು ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಡಿ.ಸಿ. ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಮಹಾರಾಷ್ಟದ ಗಡಿಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗ್ರತವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Comments are closed.