ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಶ್ರೀನಿವಾಸ ಸರಡಗಿ ‘ಎ’ ವಲಯದ ಇಟಗಾ (ಅ) ಒಂದನೇ ಅಂಗನವಾಡಿ ಕೇಂದ್ರದ ಹೊಸ ಕಟ್ಟಡವನ್ನು ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ರವಿವಾರ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಮನೆಯೇ ಮೊದಲ ಪಾಠಶಾಲೆ ಹಾಗೂ ಅಂಗನವಾಡಿ ಕೇಂದ್ರವೇ ಮೊದಲ ಶಿಕ್ಷಣ ಕೇಂದ್ರವಾಗಿದೆ. ಅಂಗನವಾಡಿ ಕೇಂದ್ರಕ್ಕೆ ಬರುವ 3 ರಿಂದ 6 ವರ್ಷದೊಳಗಿನ ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಮಾಡುವ ಜವಾಬ್ದಾರಿಯು ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ. ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ ಹೇರೂರ, ಇಟಗಾ (ಅ) ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದರು.
ವಲಯ ಮೇಲ್ವಿಚಾರಕಿ ಪಿಂಕುಬಾಯಿ ಗಾಯಕವಾಡ ಕಾರ್ಯಕ್ರಮ ನಿರೂಪಿಸಿದರು.
Comments are closed.