Shubhashaya News

ಮಾರ್ಚ್ 24ರಂದು ಬಾಲಕಾರ್ಮಿಕ ಜಾಗೃತಿ ರಥಕ್ಕೆ ಚಾಲನೆ

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧದ ಜಾಗೃತಿ ರಥಕ್ಕೆ” ಬುಧವಾರ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ಚಿಂಚೋಳಿ ತಾಲೂಕು ನ್ಯಾಯಾಲಯದ ಆವರಣದಲ್ಲಿ ಚಿಂಚೋಳಿಯ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ವಿಜಯಕುಮಾರ ಎಸ್.ಜಟ್ಲಾ ಅವರು ಚಾಲನೆ ನೀಡಲಿದ್ದಾರೆ.
ಚಿಂಚೋಳಿ ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯಾವಾದಿಗಳ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಚಿಂಚೋಳಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರೇಮಕುಮಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಚಿಂಚೋಳಿ ತಹಶೀಲ್ದಾರ ಅರುಣಕುಮಾರ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಚಿಂಚೋಳಿ ತಾಲೂಕು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಹನುಮಂತ ಹಿರೇಮನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಶೆಟ್ಟಿ ಭದ್ರಶೆಟ್ಟಿ, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ, ಎಸ್.ಎಸ್.ಎಲ್. ಕಾನೂನು ಮಹಾವಿದ್ಯಾಲಯದ ಮಕ್ಕಳ ಸಹಾಯವಾಣಿ ನೋಡಲ್ ಕೇಂದ್ರದ ಜಿಲ್ಲಾ ಸಂಯೋಜಕ ಬಸವರಾಜ ಟೇಂಗಳಿ ಹಾಗೂ ಮಾರ್ಗದರ್ಶಿ ಸಂಸ್ಥೆ ಸಂಯೋಜಕ ಸುಂದರರಾಜ್ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.

Comments are closed.

Don`t copy text!