Shubhashaya News

ಬೆಂಕಿಯಲ್ಲಿ ಮಿಂದ ಮಿಸುನಿಯರು ಕೃತಿ ಲೋಕಾರ್ಪಣೆ 27 ರಂದು

ಚಿತ್ತಾಪುರ: ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಅಂಗವಾಗಿ ಡಾ. ಪುಟ್ಟಮಣಿ ದೇವಿದಾಸ ರಚಿಸಿದ ಬೆಂಕಿಯಲ್ಲಿ ಮಿಂದ ಮಿಸುನಿಯರು ಕೃತಿ ಲೋಕಾರ್ಪಣೆ ಹಾಗೂ ಕೊರೊನಾ ವಾರಿಯರ್ಸ್‍ಗಳಿಗೆ ಅಭಿನಂದನಾ ಸಮಾರಂಭವನ್ನು ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಾ. 27ರಂದು ಬೆಳಿಗ್ಗೆ 11.40ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷೆ ನಾಗುಬಾಯಿ ಮಲಘಾಣ, ಉಪಾಧ್ಯಕ್ಷೆ ಜಯಶೀಲಾ ಬಿರಾದಾರ ತಿಳಿಸಿದ್ದಾರೆ.
ಕಂಬಳೇಶ್ವರ ಶ್ರೀ ಸೊಮಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ತಹಶೀಲ್ದಾರ ಉಮಾಕಾಂತ ಹಳ್ಳೆ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂಎಲ್‍ಸಿ ಸುನೀಲ ವಲ್ಯಾಪೂರೆ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಕಸಾಪ ಅಧ್ಯಕ್ಷ ಕಾಶಿನಾಥ ಗುತ್ತೇದಾರ, ಕೆಪಿಸಿಸಿ ನಾಗರೆಡ್ಡಿ ಪಾಟೀಲ ಕರದಾಳ, ಜಿಪಂ ಸದಸ್ಯ ಶಿವರುದ್ರ ಭೀಣಿ, ಬಿಇಒ ಸಿದ್ದವೀರಯ್ಯ ರುದ್ನೂರ್ ಸೇರಿದಂತೆ ಅನೇಕ ಗಣ್ಯಮಾನ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Comments are closed.

Don`t copy text!